- Advertisement -
- Advertisement -
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ.

ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಅ. 10ರಿಂದ 13ರವರೆಗೂ ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ ಹೆಚ್ಚಾಗಲಿದೆ. ಈ ಮೂರು ಜಿಲ್ಲೆಗಳಲ್ಲಿ ಅ. 11ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


- Advertisement -