ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ಡಿಸೆಂಬರ್ 18ರಿಂದ ಜನವರಿ 15ರವರೆಗೆ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಗ್ಲೋ ಫೆಸ್ಟ್ ಅಯೋಜಿಸಲಾಗಿದೆ. 2,000 ಕ್ಕೂ ಮಿಕ್ಕಿದ ಡಿಸೈನ್ಗಳಲ್ಲಿ ಕಣ್ಮನ ಸೆಳೆಯುವ ವಜ್ರಾಭರಣಗಳ ಸಂಗ್ರಹವಿದ್ದು, ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ವಜ್ರಾಭರಣಗಳ ಸಂಗ್ರಹವಿದ್ದು, ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ.
ಗ್ಲೋ ಫೆಸ್ಟ್ನಲ್ಲಿ ವಜ್ರಾಭರಣ ಖರೀದಿ ಮೇಲೆ ಪ್ರತಿ ಕ್ಯಾರೆಟ್ ಗೆ ರೂ.6,000/- ವರೆಗೆ ರಿಯಾಯಿತಿ, ಆಯ್ದ ವಜ್ರಾಭರಣಗಳ ಪ್ರತಿ ಖರೀದಿ ಮೇಲೆ ರೂ. 7,000/- ವರೆಗೆ ರಿಯಾಯಿತಿ ನೀಡಲಾಗುವುದು. ಗ್ಲೋ ವಜ್ರಾಭರಣಗಳ ಸಂಗ್ರಹಕ್ಕೆ By Back ಮತ್ತು Exchange ಗ್ಯಾರಂಟಿಯನ್ನು ಸಂಸ್ಥೆ ದೃಡೀಕರಿಸುತ್ತದೆ. ವಜ್ರಾಭರಣಗಳು ದುಬಾರಿ ಎಂದೇ ಭಾವನೆಯಲ್ಲಿರುವ ಜನರಿಗೆ ಕೈಗೆಟಕುವ ದರದಲ್ಲೂ ವಜ್ರಾಭರಣಗಳು ಲಭ್ಯವಿದೆ ಹಾಗೂ ಗ್ಲೋ ಫೆಸ್ಟ್ನಲ್ಲಿ ಗ್ರಾಹಕರಿಗೆ ವಜ್ರಾಭರಣಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳು ಅನ್ವಯದೊಂದಿಗೆ ಈ ಆಫರ್ ಪುತ್ತೂರು ಹಾಗೂ ಸುಳ್ಯ ಮಳಿಗೆಗಳಲ್ಲಿ ಮಾತ್ರ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.