Friday, June 5, 2026
spot_imgspot_img
spot_imgspot_img

ಕಾಸರಗೋಡು: ಕಾರು ಮತ್ತು ಬೈಕ್ ಡಿಕ್ಕಿ; ಕಾಲೇಜ್ ವಿದ್ಯಾರ್ಥಿ ಮೃತ್ಯು..!

- Advertisement -
- Advertisement -

ಕಾಸರಗೋಡು: ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಕಾಸರಗೋಡು ಸಮೀಪದ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ.

ಮೃತಪಟ್ಟ ಯುವಕ ಚೆಮ್ನಾಡ್ ಕೋಳಿಯಡ್ಕದ ಸಫ್ರಝುಲ್ ಅಮಾನ್ (20) ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಅಮಾನ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅಮಾನ್ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ . ಬೇಕಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!