Saturday, June 20, 2026
spot_imgspot_img
spot_imgspot_img

ಉಡುಪಿ: ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತ್ಯು…!

- Advertisement -
- Advertisement -

ಉಡುಪಿ: ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಅಫ್ಕಾರ್ (17) ಮೃತ ದುರ್ದೈವಿ. ಈತ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ಓದುತ್ತಿದ್ದನು. ಸ್ಟೂಡೆಂಟ್ ಇಸ್ಲಾಮಿಕ್ ಅರ್ಗನೈಸೇಶನ್ ಆಫ್ ಇಂಡಿಯಾದ ಸಕ್ರಿಯ ಸದಸ್ಯನಾಗಿದ್ದ. ಅಫ್ಕಾರ್‌ ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ. ಡಿಸೆಂಬರ್ 6ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ.

ಕಳೆದ 18ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದ ಅಫ್ಕಾರ್‌ಗೆ ಊರಿಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಗೆ ಸಾಗಿಸುವ ವೇಳೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ.

- Advertisement -

Related news

error: Content is protected !!