Sunday, June 29, 2025
spot_imgspot_img
spot_imgspot_img

ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಸ್ವಚ್ಚಗೊಳಿಸಿದ ಮುಖ್ಯ ಶಿಕ್ಷಕಿ ಅರೆಸ್ಟ್….!

- Advertisement -
- Advertisement -

ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಕ್ಲೀನ್‌ ಮಾಡಿಸಿದ ಆರೋಪದಡಿ ಸರ್ಕಾರಿ‌ ಶಾಲೆ ಮುಖ್ಯಶಿಕ್ಷಕಿಯನ್ನು ಬ್ಯಾಡರಹಳ್ಳಿ ಪೊಲೀಸರು ಇದೀಗ ಬಂಧಿಸಿದ ಘಟನೆ ನಡೆದಿದೆ.

ಯಶವಂತಪುರ ಕ್ಷೇತ್ರದ ಅಂಧ್ರಹಳ್ಳಿ ಶಾಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಪೋಷಕರಿಗೆ ವಿಷಯ ಗೊತ್ತಾಗಿ ಶಾಲೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಜೊತೆಗೆ ಶಾಲಾ ಮಕ್ಕಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಕ್ಕೆ ಪೋಷಕರು ಕಿಡಿಕಾರಿದ್ದಾರೆ. ಶಿಕ್ಷಣ ಇಲಾಖೆ ಸಚಿವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಇದಾದ ಬೆನ್ನಲ್ಲೇ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಸ್ಥಳೀಯ ಶಾಸಕ ಎಸ್ ಟಿ ಸೋಮಶೇಖರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇದೀಗ ಮಕ್ಕಳ‌ ಕೈಯಲ್ಲಿ ಶೌಚಾಲಯ ತೊಳೆಸಿದ್ದ ಸರ್ಕಾರಿ‌ ಶಾಲೆ ಮುಖ್ಯಶಿಕ್ಷಕಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಂದು ರಾತ್ರಿ ಲಕ್ಷ್ಮೀದೇವಮ್ಮರನ್ನು ರಾಜ್ಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಿದ್ದು, ಆರೋಪಿಯಾದ ಲಕ್ಷ್ಮೀದೇವರನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ.

- Advertisement -

Related news

error: Content is protected !!