- Advertisement -
- Advertisement -




ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಕನಕಪುರ ತಾಲೂಕಿನ ಬನ್ನಿಮುಕ್ಕೋಡ್ಲು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ರಾಮಕೃಷ್ಣ (52) ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ರಾಮಕೃಷ್ಣ ಗ್ರಾಮದ ಸಮೀಪವೇ ಇರುವ ಕಾಡಿಗೆ ಕಟ್ಟಿಗೆ ತರಲು ತೆರಳಿದ್ದರು. ಇದೇ ವೇಳೆ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡ ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಂದೇ ತಿಂಗಳ ಅಂತರದಲ್ಲೇ ಮೂರು ಜನರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಹೀಗಾಗಿ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕೋಡಿಹಳ್ಳಿ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತ ದೇಹವನ್ನು ಕನಕಪುರ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
- Advertisement -