Saturday, June 6, 2026
spot_imgspot_img
spot_imgspot_img

ಬಿಎಂಟಿಸಿ ಬಸ್ ಡಿಕ್ಕಿ; ಮಹಿಳೆ ಮೃತ್ಯು..!

- Advertisement -
- Advertisement -

ಬಿಎಂಟಿಸಿ ಬಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ನಗರದ ಸುಬ್ಬಯ್ಯ ಸರ್ಕಲ್ ಬಳಿ ನಡೆದಿದೆ.

ಮೃತಪಟ್ಟ ಮಹಿಳೆ ಪುಷ್ಪ (51) ಎಂದು ಗುರುತಿಸಲಾಗಿದೆ.

ಪುಷ್ಪ ನಗರದ ಕಬ್ಬನ್ ಪೇಟೆ ನಿವಾಸಿಯಾಗಿದ್ದು, ಮನೆಯಿಂದ ಬೇಕರಿಗೆ ತೆರಳುತಿದ್ದ ವೇಳೆ ಘಟನೆ ನಡೆದಿದೆ. ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದಿದೆ. ಕೂಡಲೇ ಪುಷ್ಪ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದ್ದಾರೆ. ಬಸ್ ಚಾಲಕ ನಾಗರಾಜ್​ನನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!