Saturday, June 28, 2025
spot_imgspot_img
spot_imgspot_img

ಬಿಇಒ ಕಚೇರಿಯ ಮ್ಯಾನೇಜರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕಡೂರು ಮೂಲದ ನಿಂಗನಾಯಕ್(57) ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಎಂಬುವವರು ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ಮೂಲದ ಮೃತ ನಿಂಗನಾಯಕ್ ಅವರು ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಒಂದು ವಾರದ ಹಿಂದಷ್ಟೇ ಬಿಇಒ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು. ಆಗ ಹತ್ತು ಸಾವಿರ ಹಣ ಪಡೆಯುತ್ತಿದ್ದ ಬಿಇಒ ಹೇಮಂತ್ ರಾಜ್ ಸಿಕ್ಕಿಬಿದ್ದಿದ್ದರು. ಈ ಘಟನೆ ನಡೆದ ವಾರಕ್ಕೆ ನಿಂಗರಾಜ್ ಆತ್ಯಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!