- Advertisement -
- Advertisement -
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪಾಣಾಜೆ ಆರ್ಲಪದವು ನಿವಾಸಿ ವಿಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ.
ವಿಜಯ್ ಕುಮಾರ್ ಅವರು ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರ ವಿವಾಹಕ್ಕೆ ಮನೆಯವರು ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಸಂಜೆ ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಅವರ ಆತ್ಮಹತ್ಯೆಯು ಸಂಶಯಕ್ಕೆ ಎಡೆಮಾಡಿ ಕೊಟ್ಟಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -