Sunday, June 29, 2025
spot_imgspot_img
spot_imgspot_img

ಖಾಸಗಿ ಬಸ್ ಮರಕ್ಕೆ ಡಿಕ್ಕಿ; ಓರ್ವ ಮೃತ್ಯು..!

- Advertisement -
- Advertisement -

ಖಾಸಗಿ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾ.ಹೆದ್ದಾರಿ 63ರ ಅರಬೈಲ್‌ ಬಳಿ ನಡೆದಿದೆ.

ಮೃತಪಟ್ಟ ಚಾಲಕ ಆಂದ್ರಪ್ರದೇಶದ ನೆಲ್ಲೂರಿನ ಮಲ್ಲಿನಾ ಎಂದು ಗುರುತಿಸಲಾಗಿದೆ.

ಹೈದಾರಾಬಾದ್‌ನಿಂದ ಗೋಕರ್ಣಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದ ಖಾಸಗಿ ಬಸ್‌ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್‌ ಗ್ರಾಮದ ಮಾರುತಿ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಸುಮಾರು 15ಕ್ಕೂ ಅಧಿಕ ಜನರಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಸ್ಥಳಾಂತರಿಸಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!