Tuesday, August 11, 2026
spot_imgspot_img
spot_imgspot_img

ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ದೋಚಿ ಪರಾರಿ

- Advertisement -
- Advertisement -

ಕಡಬ: ಮನೆಗೆ ಬೀಗ ಹಾಕಿ ಮನೆ ಮಂದಿ ಆತೂರು ದ್ಸಿಕ್ರ್ ಹಲ್ಕಾ ವಾರ್ಷಿಕ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯ ಬೀಗ ಮುರಿದ ಕಳ್ಳರು, ನಗ ಹಾಗೂ ನಗದನ್ನು ದೋಚಿದ್ದಾರೆ.

ಇನ್ನು ಪಕ್ಕದಲ್ಲಿರುವ ಮನೆಯೊಂದರ ಬೀಗ‌ ಮುರಿಯುವ ವೇಳೆ ಆಟೋ ರಿಕ್ಷಾ ಆಗಮಿಸುವುದನ್ನು ನೋಡಿದ ಕಳ್ಳರು ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!