Saturday, June 28, 2025
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಆಶ್ಲೇಷ ಬಲಿ‌ ಸೇವೆಗಾಗಿ ರಾತ್ರಿಯೇ ಸರತಿ ಸಾಲಿನಲ್ಲಿ ನಿಂತ ಭಕ್ತರು

- Advertisement -
- Advertisement -

ಕುಕ್ಕೆ ಸುಬ್ರಹ್ಮಣ್ಯ: ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಆಶ್ಲೇಷ ಬಲಿ‌ ಸೇವೆಗಾಗಿ ರಾತ್ರಿಯೇ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಕ್ಷೇತ್ರದಲ್ಲಿ ಕಳೆದ ಕೆಲ ದಿನಗಳಿಂದ ಹೆಚ್ಚಿನ ಭಕ್ತರು ಭೇಟಿ ನೀಡುತ್ತಿದ್ದಾರೆ.

ಇಂದು ಆಶ್ಲೇಷ ನಕ್ಷತ್ರ ವಿಶೇಷ ದಿನವಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಸೇವೆ ನೆರವೇರಿಸಲು ಭಾನುವಾರ ರಾತ್ರಿಯೇ ಸರತಿ ಸಾಲಿನಲ್ಲಿ ನಿಂತ ದೃಶ್ಯ‌‌ ಕಂಡುಬಂದಿದೆ.

ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ನಿನ್ನೆ ರಾತ್ರಿಯೇ ದೇವಾಲಯದ ಕಚೇರಿ ಬಳಿ ಸರತಿ‌ ಸಾಲಿನಲ್ಲಿ ನಿಂತಿದ್ದರು.

ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನೆಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ‌ ಸಾಲಿನಲ್ಲಿ ನಿಂತಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!