Tuesday, June 23, 2026
spot_imgspot_img
spot_imgspot_img

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ-ಸಿಸಿಬಿಯಿಂದ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಕೆ.

- Advertisement -
- Advertisement -

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಗಲಭೆ ಸಂಬಂಧ ಕೋರ್ಟ್’ಗೆ ಸಿಸಿಬಿ 850 ಪುಟಗಳ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಸಿದೆ.


ನಗರದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಸಿಸಿಬಿ ಕೋರ್ಟ್’ಗೆ ಸಲ್ಲಿಸಿರುವ 850 ಪುಟಗಳ ಮಧ್ಯಂತರ ಚಾರ್ಜ್ ಶೀಟ್ ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಎ-51ನೇ ಆರೋಪಿಯಾಗಿದ್ದರೆ, ಜಾಕೀರ್ ಹುಸೇನ್ 52ನೇ ಆರೋಪಿಯಾಗಿದ್ದಾರೆ.


52 ಆರೋಪಿಗಳ ವಿರುದ್ಧ ಕೋರ್ಟ್ ಗೆ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಸಿರುವಂತ ಸಿಸಿಬಿ ಪೊಲೀಸರು, ಪ್ರಕರಣ ಸಂಬಂಧ 30ಕ್ಕೂ ಹೆಚ್ಚು ಸಾಕ್ಷಿಗಳನ್ನು ಉಲ್ಲೇಖಿಸಿದ್ದಾರೆ. ಪ್ರಕರಣ ಸಂಬಂಧ ಹಲವರ ಹೇಳಿಕೆಗಳನ್ನು ಉಲ್ಲೇಖಿಸಲಾಗಿದ್ದು, ಟೆಕ್ನಿಕಲ್ ಹಾಗೂ ಡಿಜಿಟಲ್ ಸಾಕ್ಷ್ಯಗಳೇ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಗಳಾಗಿವೆ.

- Advertisement -

Related news

error: Content is protected !!