Friday, June 5, 2026
spot_imgspot_img
spot_imgspot_img

ನಾಮಕರಣ ಮುಗಿಸಿಕೊಂಡು ಬರುತ್ತಿದ್ದಾಗ ಭೀಕರ ಅಪಘಾತ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ

- Advertisement -
- Advertisement -

ಓಮ್ನಿ ಕಾರು ಹಾಗೂ ಬೊಲೆರೋ ಜೀಪ್ ನಡುವೆ ಭೀಕರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕುಶಾಲನಗರ ಸಮೀಪದ ಆನೆಕಾಡು ಬಳಿ ನಡೆದಿದೆ.

ದೇವಯ್ಯ ಮೃತ ದುರ್ದೈವಿ. ಮೃತ ವ್ಯಕ್ತಿಯು ಮೂಲತಃ ಮಡಿಕೇರಿ ಸಮೀಪದ ಕಾಲೂರು ನಿವಾಸಿ. ಮಡಿಕೇರಿಯಿಂದ ನಾಮಕರಣ ಮುಗಿಸಿ ಹೋಗುವಾಗ ಈ ಅಪಘಾತ ಸಂಭವಿಸಿದೆ. ಇದೇ ಕಾರಿನಲ್ಲಿದ್ದ ಓರ್ವ ಮಗು ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕುಶಾಲನರ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!