Monday, June 15, 2026
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಕಾರು; ನಾಲ್ವರು ದುರ್ಮರಣ

- Advertisement -
- Advertisement -

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ ಹೊಂದಿದ್ದಾರೆ.

ಲಿಂಗಪ್ಪ (25), ಸಿಂಧುಶ್ರೀ (2), ಅಯ್ಯಾಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಮೃತ ದುರ್ದೈವಿಗಳು. ಮೃತರು ರಾಯಚೂರು ಜಿಲ್ಲೆಯ ದಂಡಮ್ಮನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಚಳ್ಳಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳು ಯಲ್ಲಮ್ಮ (30), ಮಲ್ಲಮ್ಮ (20) ನಾಗಪ್ಪ (35) ಗಾಯಗೊಂಡ ಪ್ರಯಾಣಿಕರು. ಮಲ್ಲಮ್ಮನ ಸ್ಥಿತಿ ಗಂಭೀರ ಎನ್ನಲಾಗಿದೆ. ಮೃತರೆಲ್ಲ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಚಾಲಕ ನಿದ್ರೆ ಮಂಪರಿನಲ್ಲಿದ್ದರಿಂದ ಅಪಘಾತ ಆಗಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇವರೆಲ್ಲ ನಿಶ್ಚಿತಾರ್ಥ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ದೇವದುರ್ಗದ ದೊಂಡಂಬಳಿಗೆ ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಹೋಗುವಾಗ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!