Sunday, June 29, 2025
spot_imgspot_img
spot_imgspot_img

ಸುಳ್ಯ : ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ

- Advertisement -
- Advertisement -

ಸುಳ್ಯ : ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿಯಾಗಿ ಬೈಕ್‌ ಸವಾರ ಗಾಯಗೊಂಡ ಘಟನೆ ಅರಂಬೂರು ಬಳಿ ಇದೀಗ ನಡೆದಿದೆ.

ಸುಳ್ಯದಿಂದ ಮಡಿಕೇರಿ ಕಡೆ ಚಲಿಸುತ್ತಿದ್ದ ಕಾರು, ಪಲ್ಟಿಯಾಗಿ ಬೈಕಿಗೆ ಗುದ್ದಿದೆ ಎನ್ನಲಾಗಿದೆ. ಸ್ಥಳೀಯ ಅರಂಬೂರು ಮೈದಾನದಲ್ಲಿ ಆಟವಾಡುತ್ತಿದ್ದ ಯುವಕರು ತಕ್ಷಣ ಸ್ಪಂದಿಸಿದ್ದಾರೆ

ಸಂಪಾಜೆಯ ಪುರುಷೋತ್ತಮ ಎಂಬವರು ತಮ್ಮ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮುಂದಿನಿಂದ ಬಂದ ಕಾರು ಪಲ್ಟಿ ಹೊಡೆದು ಬೈಕ್‌ಗೆ ಡಿಕ್ಕಿಯಾಗಿದೆ, ಬೈಕ್‌ ಸವಾರ ಗಾಯಗೊಂಡಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

- Advertisement -

Related news

error: Content is protected !!