- Advertisement -
- Advertisement -
ಆಟವಾಡಲೆಂದು ಸಿಮೆಂಟ್ ಜಿಂಕೆ ಮೇಲೆ ಏರಿ ಆ ಪ್ರತಿಮೆ ಮುರಿದು ಬಿದ್ದು 6 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್ ನಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಶಿವಮೊಗ್ಗ ನಗರದ ಹರೀಶ್, ಲಕ್ಷ್ಮೀ ದಂಪತಿ ಪುತ್ರಿ ಸಮೀಕ್ಷಾ ಎಂದು ಗುರುತಿಸಲಾಗಿದೆ.
ಭಾನುವಾರ ರಜಾ ಹಿನ್ನೆಲೆ ಕುಟುಂಬಸ್ಥರು ಮಕ್ಕಳೊಂದಿಗೆ ಟೀ ಪಾರ್ಕ್ಗೆ ತೆರಳಿದ್ದರು. ಈ ವೇಳೆ ಸಿಮೆಂಟ್ ಜಿಂಕೆ ಮೇಲೆ ಮಗು ಕುಳಿತುಕೊಂಡ ವೇಳೆ ಭಾರ ತಾಳದೇ ಸಿಮೆಂಟ್ ಜಿಂಕೆ ಮುರಿದು ಬಿದ್ದಿದೆ. ಆಟವಾಡಲು ಪೋಷಕರೊಂದಿಗೆ ಮಗು ತೆರಳಿದ್ದು ಈ ವೇಳೆ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
- Advertisement -