Tuesday, August 25, 2026
spot_imgspot_img
spot_imgspot_img

ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್‌ ಅಪಘಾತ; ಚಾಲಕ ಗಂಭೀರ

- Advertisement -
- Advertisement -

ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ಅಪಘಾತಕ್ಕೀಡಾಗಿರುವ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ.

ಮಂಗಳೂರಿನಿಂದ ಕುಂದಾಪುರ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ಎದುರಿನಲ್ಲಿದ್ದ ನವಯುಗ ಕಂಪೆನಿಯ ವಾಹನಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಟ್ಯಾಂಕರ್ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಅಪಘಾತಕ್ಕೀಡಾದ ಬಳಿಕ ಟ್ಯಾಂಕರ್ ಅಲ್ಲೇ ಮುಂದೆ ಸಾಗಿ ನಿಂತಿತ್ತೆನ್ನಲಾಗಿದೆ. ಎರಡು ಅಡಿ ಮುಂದೆ ಸಾಗುತ್ತಿದ್ದರೆ ಅಲ್ಲೇ ಇದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮುಂದೆ ಇದ್ದ ಮನೆ ಮೇಲೆ ಬೀಳುವ ಅಪಾಯ ಇತ್ತೆನ್ನಲಾಗಿದೆ. ಈ ದುರಂತ ಸ್ವಲ್ಪದರಲ್ಲೇ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!