- Advertisement -
- Advertisement -




ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ವಿನೋಬನಗರ ರೈಲ್ವೆ ಬ್ಯಾರಲಲ್ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಗುಜರಿ ವ್ಯಾಪಾರ ಮಾಡುತ್ತಿದ್ದ ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಎಂದು ಗುರುತಿಸಲಾಗಿದೆ.
ಮುತ್ತಪ್ಪ ಮೂತ್ರ ವಿಸರ್ಜನೆಗೆಂದು ಹೋದಾಗ ಚರಂಡಿಯ ಸ್ಲ್ಯಾಬ್ ಕುಸಿದು ಹತ್ತು ಅಡಿ ಆಳದ ಚರಂಡಿಗೆ ಹೋಗಿ ಬಿದ್ದಿದ್ದಾರೆ. ಆಗ ಕಾಂಕ್ರೀಟ್ ಸ್ಲ್ಯಾಬ್ ಮೈಮೇಲೆ ಬಿದ್ದಿದ್ದು, ಕಲ್ಲುಗಳು, ಕಾಂಕ್ರಿಟ್ ಬಿದ್ದಿರುವ ವೇಗಕ್ಕೆ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಅಲ್ಲಿನ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಕಳಪೆ ಕಾಮಗಾರಿಯಿಂದ ಮುತ್ತಪ್ಪ ಮೃತಪಟ್ಟಿದ್ದಾರೆ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆಯ ಬಗ್ಗೆ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








