Sunday, September 27, 2026
spot_imgspot_img
spot_imgspot_img

ವೈದ್ಯರ ನಿರ್ಲಕ್ಷ್ಯಕ್ಕೆ ಅವಳಿ ಮಕ್ಕಳು, ಬಾಣಂತಿ ಸಾವು

- Advertisement -
- Advertisement -

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಅವಳಿ ಕಂದಮ್ಮಗಳು ಸಾವನ್ನಪ್ಪಿರುವ ಆರೋಪ ಗದಗದ ಗಜೇಂದ್ರಗಡ ಪಟ್ಟಣದ ಖಾಸಗಿ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.

ಕಾರೊಡಗಿಮಠ ಆಸ್ಪತ್ರೆಯಲ್ಲಿ ಫೆಬ್ರವರಿ 2 ರಂದು ವಿರುಪಾಪೂರ ಗ್ರಾಮದ‌ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಸಿಜೇರಿಯನ್ ಮೂಲಕ ವೈದ್ಯರು ಹೆರಿಗೆ ಮಾಡಿಸಿದ್ದರು. ಹೆರಿಗೆ ನಂತರ ಅವಳಿ ಮಕ್ಕಳು ಸಾವನ್ನಪ್ಪಿದ್ದವು. ನಂತರ ತೀವ್ರ ರಕ್ತಸ್ರಾವದಿಂದ ಬಾಣಂತಿಗೆ ಲೋ ಬಿಪಿ ಆಗಿತ್ತು.

ತಕ್ಷಣ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆ ಬದಾಮಿ ಖಾಸಗಿ ಆಸ್ಪತ್ರೆಗೆ ರವಾನಿಸಿದರೂ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಳು. ಸಿಜೇರಿಯನ್ ಹೆರಿಗೆ ವೇಳೆ ರಕ್ತದ ವ್ಯವಸ್ಥೆ ಮಾಡದೇ ಹೆರಿಗೆ ಮಾಡಿಸಿದ್ದಾರೆಂದು ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

- Advertisement -

Related news

error: Content is protected !!