Monday, June 22, 2026
spot_imgspot_img
spot_imgspot_img

ಕೌಟುಂಬಿಕ ಕಲಹ; ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು..!

- Advertisement -
- Advertisement -

ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ತುಮಕೂರಿನ ತಿಪಟೂರಿನ ಮೂಡಲ್ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ.

ಮೃತಪಟ್ಟ ಯುವತಿ ಸೌಮ್ಯ (22) ಎಂದು ಗುರುತಿಸಲಾಗಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಬೊಮ್ಮೇನಹಳ್ಳಿ ಮೂಲದ ಸೌಮ್ಯ ವಯಸ್ಸಿನಲ್ಲಿ ತನಗಿಂತಲೂ 18 ವರ್ಷ ದೊಡ್ಡವನಾದ ಪ್ರಸಾದ್ (40) ಎಂಬುವವರ ಜತೆಗೆ ಮದುವೆಯಾಗಿದ್ದಳು. ಆದರೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಕುಟುಂಬಸ್ಥರು ರಾಜಿ ಪಂಚಾಯಿತಿಯನ್ನು ಮಾಡಿದ್ದರು.

ಆದರೆ ನೇಣು ಬಿಗಿದ ಸ್ಥಿತಿಯಲ್ಲಿ ಸೌಮ್ಯಳ ಮೃತದೇಹವು ಪತ್ತೆಯಾಗಿದೆ. ಇತ್ತ ಸೌಮ್ಯಳ ಕುಟುಂಬಸ್ಥರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದಾರೆ. ಕಳೆದ ರಾತ್ರಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಸೌಮ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ಸೌಮ್ಯಳ ಪತಿ ಪ್ರಸಾದ್‌ ಹಾಗೂ ಮಾವನ ವಿರುದ್ಧ ದೂರು ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ತಿಪಟೂರಿನ ಶವಾಗಾರಕ್ಕೆ ಸೌಮ್ಯ ಮೃತದೇಹವನ್ನು ರವಾನೆ ಮಾಡಲಾಗಿದೆ. ನೋಣವಿನಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!