Saturday, June 28, 2025
spot_imgspot_img
spot_imgspot_img

ಪೇಂಟ್​​ ಫ್ಯಾಕ್ಟರಿಯಲ್ಲಿ ದಿಢೀರ್ ಬೆಂಕಿ; 11 ಮಂದಿ ಸಾವು, ನಾಲ್ವರು ಗಂಭೀರ

- Advertisement -
- Advertisement -

ಪೇಂಟ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಸಾವನ್ನಪ್ಪಿರುವ ಘಟನೆ ದೆಹಲಿಯ ಅಲಿಪುರದ ಮುಖ್ಯ ಮಾರುಕಟ್ಟೆಯಲ್ಲಿ ನಡೆದಿದೆ. ನಾಲ್ಕು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ದಯಾಳ್ ಮಾರ್ಕೆಟ್‌ನಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅದರಲ್ಲಿ ಒಬ್ಬರು ಪೊಲೀಸ್​​ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ನಾಲ್ವರು ಗಾಯಾಳುಗಳನ್ನು ರಾಜಾ ಹರೀಶ್ ಚಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇನ್ನು ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಂಕಿ ಕೆನ್ನಾಲಿಗೆಗೆ ಹತ್ತಿರದ ಕೆಲವು ಮನೆಗಳು, ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -

Related news

error: Content is protected !!