Tuesday, July 1, 2025
spot_imgspot_img
spot_imgspot_img

ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

- Advertisement -
- Advertisement -

ಉಳ್ಳಾಲ: ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ ಎಂದು ತಿಳಿದು ಬಂದಿದೆ.

ಫೈನಾನ್ಸ್ ಸೀಸ‌ರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್‌ ಪ್ರತಿಷ್ಟೆ, ಕಲಶಾಭಿಶೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದರು ಎನ್ನಲಾಗಿದೆ. ಮನೆಯಿಂದ ರಾತ್ರಿ ಹೊರಹೋಗಿದ್ದ ಗೌತಮ್ ಮತ್ತೆ ವಾಪಸಾಗದ ಹಿನ್ನೆಲೆಯಲ್ಲಿ ಮರುದಿನ ಮನೆ ಮಂದಿ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಬುಧವಾರ ಸಂಜೆ ವೇಳೆ ನೇತ್ರಾವತಿ ನದಿಯಲ್ಲಿ ಗೌತಮ್ ಶವವಾಗಿ ಪತ್ತೆಯಾಗಿದ್ದು ಪಾಂಡೇಶ್ವರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮನೆ ಮಂದಿ ಮೃತದೇಹವನ್ನು ಗುರುತಿಸಿದ್ದು ಅವರ ಸಮಕ್ಷಮದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಮೃತ ಗೌತಮ್ ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.

- Advertisement -

Related news

error: Content is protected !!