Sunday, August 23, 2026
spot_imgspot_img
spot_imgspot_img

ಪಣಂಬೂರು: ವಿಹಾರಕ್ಕೆಂದು ಬಂದಿದ್ದ ಮೂವರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆ

- Advertisement -
- Advertisement -

ಪಣಂಬೂರು: ಕಡಲ ತೀರಕ್ಕೆ ವಿಹಾರಕ್ಕೆಂದು ಬಂದಿದ್ದ ಮೂವರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಇಂದು ಸಂಜೆ ಪಣಂಬೂರು ಬೀಚ್‌ನಲ್ಲಿ ನಡೆದಿದೆ.

ಕೈಕಂಬ ರೋಸಾ ಮಿಸ್ತಿಕಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿರುವ ಲಿಖಿತ್ (18), ಬೈಕಂಪಾಡಿಯ ಎಂಎಂಆರ್ ಕಂಪೆನಿಯ ಮೇಲ್ವಿಚಾರಕ ನಾಗರಾಜ್ (24) ಹಾಗೂ ಮೀಶೋ ಕಂಪೆನಿಯ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಮಿಲನ್ (20) ನಾಪತ್ತೆಯಾದವರು ಎಂದು ತಿಳಿದು ಬಂದಿದೆ.
ಇವರು ಸಂಜೆ 6 ಗಂಟೆಯ ಸುಮಾರಿಗೆ ಪಣಂಬೂರು ಸಮುದ್ರ ಕಿನಾರೆಯಲ್ಲಿ ಸಮುದ್ರದ ಅಲೆಗಳ ಜೊತೆ ಆಟವಾಡುತ್ತಿದ್ದರು. ಈ ವೇಳೆ ಬೃಹತ್ ಅಲೆಯ ರಭಸಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!