Thursday, June 18, 2026
spot_imgspot_img
spot_imgspot_img

ಬಂಟ್ವಾಳ: ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; ಲಾರಿ ಚಾಲಕ ಗಂಭೀರ

- Advertisement -
- Advertisement -

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿಇಂದು ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್ ನಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಸಹಿತ ಅನೇಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತ ಸಂಭವಿಸಿದ ರಸ್ತೆಯ ಎದುರು ಭಾಗದಲ್ಲಿ ದೊಡ್ಡ ಪ್ರಪಾತವಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!