Tuesday, June 9, 2026
spot_imgspot_img
spot_imgspot_img

ಮಂಗಳೂರು: ಪುತ್ತಿಲ ಇಂದು ಸಂಜೆ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ; ಎಂಪಿ ಚುನಾವಣೆಯಲ್ಲಿ ಜೊತೆಯಾಗಿ ಕೆಲಸ ಮಾಡುವಂತೆ ಬಿಜೆಪಿ ಹೈಕಮಾಂಡ್ ಸೂಚನೆ

- Advertisement -
- Advertisement -

ಪುತ್ತಿಲ ಪರಿವಾರದ ನಾಯಕ ಅರುಣ್‌ ಕುಮಾರ್‌ ಪುತ್ತಿಲ ಕೆಲ ದಿನಗಳ ಹಿಂದೆ ಬೆಂಗಳೂರಿನ ಬಿಜೆಪಿ ಕಛೇರಿಗೆ ಭೇಟಿ ನೀಡಿದ್ದು, ಇಂದು ಸಂಜೆ ಮಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಂಬರುವ ಎಂ ಪಿ ಚುನಾವಣೆಯಲ್ಲಿ ಜೊತೆಯಾಗಿ ಕೆಲಸ ಮಾಡುವಂತೆ ಬಿಜೆಪಿ ಸೂಚನೆ ನೀಡಿದ್ದು, ಪುತ್ತಿಲ ಪರಿವಾರವನ್ನು ಬರ್ಕಾಸ್ತು ಮಾಡಿ ಬಂದರೆ ಸ್ವಾಗತ, ಎಂಬಿತ್ಯಾದಿ ಹಲವು ಸೂಚನೆ, ನಿರ್ಬಂಧನೆಗಳು ಬಿಜೆಪಿ ರಾಜ್ಯಾಧ್ಯಕ್ಷರು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಸಂಘದ ಮತ್ತು ಪರಿವಾರದ ಹಿರಿಯರನ್ನು ಭೇಟಿ ಮಾಡಿ ಗೌರವ ಕೊಡುವಂತೆ ಸೂಚನೆ ನೀಡಲಾಗಿದ್ದು, ಇಂದು ಸಂಜೆ ಮಂಗಳೂರು ಬಿಜೆಪಿ ಕಚೇರಿಗೆ ಪುತ್ತಿಲ ಭೇಟಿ ನೀಡಲಿದ್ದಾರೆ. ಬಳಿಕ ಕೆಲವೇ ದಿನಗಳಲ್ಲಿ ಪುತ್ತೂರಿನಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ವಲಯದ ಬಲ್ಲ ಮೂಲಗಳಿಂದ ಮಾಹಿತಿ ಲಭಿಸಿದೆ.

- Advertisement -

Related news

error: Content is protected !!