Monday, August 10, 2026
spot_imgspot_img
spot_imgspot_img

ಶಾಲೆಯಿಂದ ದೇವಸ್ಥಾನಕ್ಕೆ ದೀಪ ಹಚ್ಚಲು ಹೋದ ಬಾಲಕಿ ಬೆಂಕಿ ತಗುಲಿ ಮೃತ್ಯು..! ಶಿಕ್ಷಕರು ಅಮಾನತು

- Advertisement -
- Advertisement -

ಶಾಲೆಯ ಸಮೀಪದ ದೇವಸ್ಥಾನಕ್ಕೆ ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಬಟ್ಟೆಗೆ ಬೆಂಕಿ ತಗುಲಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿ ನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಮೇಳಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ ಮೃತಪಟ್ಟ ಬಾಲಕಿ

ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದ ವೇಳೆ ಆಕೆ ಶಾಲೆಯ ಪಕ್ಕದಲ್ಲೇ ಇರುವ ದೇವಾಲಯದಲ್ಲಿ ದೀಪ ಹಚ್ಚಲು ತನ್ನ ಜತೆಗೆ ತರಗತಿಯ ಇತರ ಕೆಲವು ಮಕ್ಕಳನ್ನು ಕೂಡಾ ಆಕೆ ಕರೆದುಕೊಂಡು ಹೋಗಿದ್ದಳು.
ಆ ಬಾಲಕಿಗೆ ದೀಪ ಹಚ್ಚಿದರೆ ಒಳ್ಳೆಯದಾಗುತ್ತದೆ ಎನ್ನುವುದು ಗೊತ್ತಿತ್ತೇ ವಿನಃ ಬೆಂಕಿಯಿಂದ ಆಗಬಹುದಾದ ಅನಾಹುತಗಳ ಅರಿವು ಇರಲಿಲ್ಲ. ಆದರೆ, ದುರದೃಷ್ಟವಶಾತ್ ಅಲ್ಲಿ ದುರಂತ ಸಂಭವಿಸಿಯೇ ಬಿಟ್ಟಿತು.ಶಾಲೆಯಲ್ಲಿ ಒಂದರಿಂದ ಏಳನೇ ತರಗತಿಯ ವರೆಗೆ ಸುಮಾರು 75 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ ಪಾಠ ಮಾಡಲು ನಾಲ್ಕು ಜನ ಶಿಕ್ಷಕರಿದ್ದಾರೆ. ಆದರೆ ಮಕ್ಕಳ ಮೇಲೆ ನಿಗಾ ಇಡದೆ ಇರುವುದು ತಪ್ಪು ಎಂಬ ನೆಲೆಯಲ್ಲಿ ಎಲ್ಲ ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

- Advertisement -

Related news

error: Content is protected !!