Saturday, August 8, 2026
spot_imgspot_img
spot_imgspot_img

ಸ್ಕೂಟಿಗೆ ಕಾರು ಢಿಕ್ಕಿ: ವಿದ್ಯಾರ್ಥಿ ಮೃತ್ಯು

- Advertisement -
- Advertisement -

ಸ್ಕೂಟಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ಸಮೀಪ ಜೆಟ್ ಕಟ್ ಬಳಿ ನಡೆದಿದೆ.

ಮಣಿಪಾಲದಲ್ಲಿ ವ್ಯಾಸಂಗ ಮಾಡುತ್ತಿರುವ ಬೆಂಗಳೂರು ಮೂಲದ ಜಸ್ಟಿನ್ ಎಚ್. ರೆಡ್ಡಿ ಮೃತಪಟ್ಟ ವಿದ್ಯಾರ್ಥಿ.

ಮಣಿಪಾಲದಿಂದ ಸೋಮೇಶ್ವರದ ಕಡೆ ಹೋಗುತ್ತಿದ್ದ ಸ್ಕೂಟಿಗೆ ಎದುರುಗಡೆಯಿಂದ ಬಂದ ಕಾರೊಂದು ಢಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದು,ರಸ್ತೆಯಲ್ಲಿ ಬಿದ್ದಿದ್ದ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸ್ಥಳೀಯರು ಸಹಕರಿಸಿದ್ದಾರೆ. ಘಟನೆ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!