Sunday, June 7, 2026
spot_imgspot_img
spot_imgspot_img

ಬಂಟ್ವಾಳ: ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಸಾವು..!

- Advertisement -
- Advertisement -

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತಪಟ್ಟ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಎಂದು ಗುರುತಿಸಲಾಗಿದೆ.

ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ಯಾದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳುತ್ತಿದ್ದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

- Advertisement -

Related news

error: Content is protected !!