Friday, September 25, 2026
spot_imgspot_img
spot_imgspot_img

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ : ವೇಣೂರು ಪೊಲೀಸರ ದಾಳಿ

- Advertisement -
- Advertisement -

ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು, ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ, ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್ ಠಾಣಾ ಪಿಎಸ್ಟ್ ಶ್ರೀಶೈಲ ಡಿ ಮುರಗೋಡ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿಯ ವಶದಲ್ಲಿದ್ದ 90 ಎಂ.ಎಲ್. ಮದ್ಯ ತುಂಬಿದ 32 ಸ್ಯಾಚೆಟ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮದ್ಯದ ಒಟ್ಟು ಪ್ರಮಾಣ 2.880 ಲೀಟ‌ರ್ ಆಗಿದ್ದು, ಅಂದಾಜು ಮೌಲ್ಯ ರೂ1,312/- ರೂಪಾಯಿ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!