Tuesday, June 16, 2026
spot_imgspot_img
spot_imgspot_img

ಕಾರ್ಕಳ: ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿ- ಓರ್ವ ಮೃತ್ಯು, ನಾಲ್ವರಿಗೆ ಗಾಯ

- Advertisement -
- Advertisement -

ಕಾರ್ಕಳ: ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಮಾಳ ಗ್ರಾಮದ ಕಡಾರಿ ಕ್ರಾಸ್‌ನಲ್ಲಿ ನಡೆದಿದೆ.

ಹೆಜಮಾಡಿಯಿಂದ ಮಾಳದೆಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಐವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕೂಡಲೇ ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಮೃತಪಟ್ಟಿರುತ್ತಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!