Saturday, June 28, 2025
spot_imgspot_img
spot_imgspot_img

ಸಹೋದರರ ನಡುವೆ ನೀರಿನ ವಿಚಾರಕ್ಕಾಗಿ ಜಗಳ; ಕೊಲೆಯಲ್ಲಿ ಅಂತ್ಯ..!

- Advertisement -
- Advertisement -
This image has an empty alt attribute; its file name is Lakshmi-Ganesh-2-1024x683.jpg

ಕುಡಿಯುವ ನೀರಿನ ವಿಚಾರಕ್ಕೆ ಸಹೋದರ ಸಂಬಂಧಿಗಳ ನಡುವೆ ಶುರುವಾದ ಜಗಳ ಯುವಕನ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಹುಣಸಗಿಯಲ್ಲಿ ನಡೆದಿದೆ.

ಕೊಲೆಯಾದ ಯುವಕ ನಗರದ ನಂದಕುಮಾರ್ ಕಟ್ಟಿಮನಿ (21) ಎಂದು ಗುರುತಿಸಲಾಗಿದೆ.

ನಂದಕುಮಾರ್‌ನ ಚಿಕ್ಕಪ್ಪನ ಮಗ ಹನುಮಂತ ಹಾಗೂ ಆತನ ತಾಯಿ ಹನುಮವ್ವ ಕೊಲೆಗೈದ ಆರೋಪಿಗಳಾಗಿದ್ದಾರೆ. ಇಬ್ಬರ ಮನೆಯ ಬಳಿ ಸರ್ಕಾರದ ಕುಡಿಯುವ ನೀರಿನ ನಲ್ಲಿ ಇದೆ. ಈ ನೀರನ್ನು ಎರಡೂ ಕುಟುಂಬದವರೂ ಬಳಸಿಕೊಳ್ಳುತ್ತಿದ್ದರು. ಎಂದಿನಂತೆ ಇಂದು ಸಹ ಹತ್ಯೆಯಾದ ನಂದಕುಮಾರ್‌ನ ಅಜ್ಜಿ ನೀರಿಗೆ ಹೋಗಿದ್ದಾಗ ಎರಡೂ ಕುಟುಂಬದ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!