Saturday, June 28, 2025
spot_imgspot_img
spot_imgspot_img

ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ಡಿಕ್ಕಿ; ಮೂವರು ಮೃತ್ಯು, 20 ಕುರಿಗಳು ಸಾವು..!

- Advertisement -
- Advertisement -

ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸೇರಿದಂತೆ 20 ಕುರಿಗಳು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ನಡೆದಿದೆ.

ಮೃತಪಟ್ಟವರನ್ನು ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗುಡ್ಡಪ್ಪ ಕೈದಾಳಿ(40), ಮೈಲಾರಪ್ಪ ಕೈದಾಳಿ(41), ಶಿವರಾಜ್ ಹೊಳೆಪ್ಪನವರ(22) ಎಂದು ಗುರುತಿಸಲಾಗಿದೆ.

ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗಮಧ್ಯೆ ದುರಂತ ಸಂಭವಿಸಿದೆ. ಬೀರಪ್ಪ ದೊಡ್ಡಚಿಕ್ಕಣ್ಣನವರ, ನಿಂಗರಾಜ್ ಹಿತ್ತಲಮನಿ ಮತ್ತಯ ನಿಂಗಪ್ಪ ಕೊರಗುಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಮತ್ತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!