Saturday, June 28, 2025
spot_imgspot_img
spot_imgspot_img

ಸುಮಲತಾ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್; ಸೇರ್ಪಡೆ ವೇಳೆ ಬಿಜೆಪಿಯ ಘಟಾನುಘಟಿ ನಾಯಕರು ಹಾಜರು!

- Advertisement -
- Advertisement -

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರಲಿದ್ದಾರೆ. 2019ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದ ಸುಮಲತಾ, ಬಳಿಕ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು. ಆದರೆ ಅಧಿಕೃತವಾಗಿ ಬಿಜೆಪಿ ಸೇರಿರಲಿಲ್ಲ. ಇದೀಗ ಸುಮಾಲತಾ ಅಂಬರೀಶ್ ಬಿಜೆಪಿ ಸೇರುವುದು ಕನ್ಫರ್ಮ್ ಆಗಿದೆ.

ಇಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯುವ ಪಕ್ಷ ಸೇರ್ಪಡೆ ಕಾರ್ಯಕ್ರದಲ್ಲಿ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ, ಆರ್.‌ ಅಶೋಕ್‌, ಮಾಜಿ ಸಿಎಂ ಬಿ.ಎಸ್‌. ಬಿ.ಎಸ್.‌ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಸುಮಲತಾ ಅಂಬರೀಶ್‌ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇನ್ನು ಇದೇ ವೇಳೆ ಸುಮಲತಾ ಅಂಬರೀಶ್ ಅವರ ಬೆಂಬಲಿಗರು ಸಹ ಬಿಜೆಪಿ ಸೇರಲಿದ್ದಾರೆ.

ಈ ಕುರಿತಂತೆ ಸುಮಲತಾ ಅಂಬರೀಶ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೇನೆ ಅಂತ ಬರೆದುಕೊಂಡಿದ್ದಾರೆ.

- Advertisement -

Related news

error: Content is protected !!