Sunday, June 29, 2025
spot_imgspot_img
spot_imgspot_img

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವು..!

- Advertisement -
- Advertisement -

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಹೊಳೆಹೊನ್ನೂರು ಶ್ರೀ ಕ್ಷೇತ್ರ ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ನಡೆದಿದೆ.

ಮೃತಪಟ್ಟ ಯುವಕ ಶಿವಮೊಗ್ಗ ಅಣ್ಣಾನಗರದ ಸಮಿವುಲ್ಲಾ ಹಾಗೂ ತಸ್ಮಿಯಾ ಬಾನು ಇವರ ಪುತ್ರ ಮುಬಾರಕ್ (18) ಎಂದು ಗುರುತಿಸಲಾಗಿದದೆ.

ಈತ ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.ಈತ ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದಾಗ ಈ ಘಟನೆ ನಡೆದಿದೆ. ಈ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!