Saturday, June 28, 2025
spot_imgspot_img
spot_imgspot_img

ಉಳ್ಳಾಲ: ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಯತ್ನ : ಗಾಯಾಳು ಗಂಭೀರ

- Advertisement -
- Advertisement -

ಉಳ್ಳಾಲ: ಉಳ್ಳಾಲ ನಗರಸಭೆ ಕಚೇರಿ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರಿಗೆ ಶನಿವಾರ ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.

ಚೂರಿ ಇರಿತಕ್ಕೆ ಒಳಗಾದವರನ್ನು ಹಮೀದ್ ಪಿ.ಎಂ. ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡ ಹಮೀದ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಬಂದರು ಭಾಗದ ಈಜುಪಟುವೊಬ್ಬರು ಈ ಕೃತ್ಯ ಎಸಗಿದ್ದಾರೆ ಎನ್ನುವ ಮಾಹಿತಿ ಇದೆ. ಹಣದ ವಿಚಾರವಾಗಿ ಕೃತ್ಯ ನಡೆದಿರುವ ಸಾಧ್ಯತೆಗಳಿವೆ ಎಂದು ಉಳ್ಳಾಲ ಪೊಲೀಸರು ಸಂದೇಹ ವ್ಯಕ್ತಪಡಿಸಿದರು. ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಪೊಲೀಸರು ಆರೋಪಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

- Advertisement -

Related news

error: Content is protected !!