Monday, July 27, 2026
spot_imgspot_img
spot_imgspot_img

ದಕ್ಷಿಣ ಕನ್ನಡದಲ್ಲಿ 183, ಉಡುಪಿ 129 ಮಂದಿಗೆ ಕೊರೊನಾ ಸೋಂಕು :ರಾಜ್ಯದಲ್ಲಿ ಇಂದು 7012 ಮಂದಿಗೆ ಕೊರೊನಾ ಸೋಂಕು..!

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 7012 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,51 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 765586 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 645825 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3535 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 25 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 3845 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 64435 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 183 ಮಂದಿಗೆ ಸೋಂಕು ತಗುಲಿದೆ.272 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 28314 ಆಗಿದ್ದು, ಇಲ್ಲಿಯವರೆಗೆ 24288 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3393 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 631 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 129 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 20808 ಆಗಿದ್ದು ,ಇಲ್ಲಿಯವರೆಗೆ 18732 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1903 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!