Saturday, September 19, 2026
spot_imgspot_img
spot_imgspot_img

ಉಪ ಮುಖ್ಯಮಂತ್ರಿ ಕಾರಜೋಳ ಪುತ್ರನ ಆರೋಗ್ಯ ಸ್ಥಿತಿ ಗಂಭೀರ : ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಏರ್‌ ಲಿಫ್ಟ್

- Advertisement -
- Advertisement -

ಬೆಂಗಳೂರು: ಕೊರೋನಾದಿಂದ ಬಳಲುತ್ತಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ ಅವರನ್ನು ಚೆನ್ನೈ ಬದಲು ಏರ್‌ ಲಿಫ್ಟ್ ಮೂಲಕ ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿದೆ.

ಸೆಪ್ಟಂಬರ್‌ 23 ರಿಂದ ಕೊರೊನಾ ಸೋಂಕಿಗೆ ತುತ್ತಾಗಿರುವ ಡಾ. ಗೋಪಾಲ ಕಾರಜೋಳ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಚೆನೈ ಅಥವಾ ಹೈದರಾಬಾದ್‌ಗೆ ಸ್ಥಳಾಂತರಿಸುವಂತೆ ವೈದ್ಯರು ಸಲಹೆ ನೀಡಿದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಕಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅವರ ಕಿರಿಯ ಸಹೋದರರಾದ ಡಾ. ಉದಯ ಕಾರಜೋಳ ಹಾಗೂ ಉಮೇಶ್‌ ಕಾರಜೋಳ ಕೂಡ ಅವರೊಂದಿಗೆ ತೆರಳಿದ್ದಾರೆ. ಆದರೆ, ಕೊರೋನಾ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!