Friday, June 5, 2026
spot_imgspot_img
spot_imgspot_img

ಚಲಿಸುತ್ತಿದ್ದ ಬೈಕ್​​ಗೆ ಹಿಂಬದಿಯಿಂದ ಕಾರು ಡಿಕ್ಕಿ

- Advertisement -
- Advertisement -

ಚಿತ್ರದುರ್ಗ: ಚಲಿಸುತ್ತಿದ್ದ ಬೈಕ್​​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.  ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಟಿ. ನುಲೇನೂರು ಗೇಟ್ ಬಳಿ ಈ ಘಟನೆ ನಡೆದಿದೆ.


ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕಾರಿನ ಮೇಲೆ ಹಾರಿ, ರಸ್ತೆಯಲ್ಲಿ ದೂರಕ್ಕೆ ಹೋಗಿ ಬಿದ್ದಿದ್ದಾರೆ. ಇದರಿಂದ ಅವರು ಗಾಯಗೊಂಡಿದ್ದು. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಕಾರು ಚಾಲಕನ ಅತಿ ವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ‌ನಡೆದಿದೆ. ಗಾಯಗೊಂಡ ಬೈಕ್ ಸವಾರನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

- Advertisement -

Related news

error: Content is protected !!