- Advertisement -
- Advertisement -


ಕುಂದಾಪುರ: ಈದ್ ಪ್ರಯುಕ್ತ ಖಾಸಗಿ ರೆಸಾರ್ಟ್ ನಲ್ಲಿ ಆಟವಾಡಲು ಹೋಗಿದ್ದ ಸಂದರ್ಭದಲ್ಲಿ ಆಟವಾಡಲು ನೀರಿಗಿಳಿದ ನಾಲ್ಕನೇ ತರಗತಿಯ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ಶಂಕರನಾರಾಯಣದಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ಮುಹಮ್ಮದ್ ಅರೀಝ್ (10) ಎಂದು ಗುರುತಿಸಲಾಗಿದೆ.
ಗುರುವಾರ ಮನೆ ಮಂದಿಯೊಂದಿಗೆ ಹೆಂಗವಳ್ಳಿಯ ಖಾಸಗಿ ರೆಸಾರ್ಟ್ ಸ್ವಿಮಿಂಗ್ ಫುಲ್ ನ ನೀರಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ.
ಬಾಲಕ ಅರೀಝ್ ಸಾವಿಗೆ ರೆಸಾರ್ಟ್ ಅವರ ನಿರ್ಲಕ್ಷ್ಯವೇ ಕಾರಣವೆಂದು ದೂರಿನಲ್ಲಿ ಆರೋಪಿಸಲಾಗಿದೆ. ಲೈಫ್ ಜಾಕೆಟ್, ಲೈಫ್ ಗಾರ್ಡ್ ಇನ್ನಿತರ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈತ ಹೂಡೆಯ ದಾರುಸ್ಟಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಯಾಗಿದ್ದನು.
- Advertisement -








