Sunday, June 29, 2025
spot_imgspot_img
spot_imgspot_img

ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ದಂಪತಿಯ 98 ಕೋಟಿ ರೂ. ಆಸ್ತಿ ಇಡಿ ವಶಕ್ಕೆ..!

- Advertisement -
- Advertisement -

ಮುಂಬೈ :ಖ್ಯಾತ ಬಾಲಿವುಡ್ ನಟಿ ಮಂಗಳೂರು ಬೆಡಗಿ ಶಿಲ್ಪಾ ಶೆಟ್ಟಿಗೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಶಿಲ್ಪಾ ಹಾಗೂ ಪತಿ ರಾಜ್​ ಕುಂದ್ರಾಗೆ ಸೇರಿದ ಸುಮಾರು 98 ಕೋಟಿ ರೂಪಾಯಿ ಬೆಲೆ ಬಾಳುವ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜುಹುದಲ್ಲಿರುವ ಅವರ ಫ್ಲ್ಯಾಟ್, ಪುಣೆಯಲ್ಲಿರುವ ಬಂಗಲೆ, ರಾಜ್ ಕುಂದ್ರಾ ಹೆಸರಲ್ಲಿರುವ ಶೇರುಗಳನ್ನು ಜಪ್ತಿ ಮಾಡಲಾಗಿದೆ.

2017ರಲ್ಲಿ 6600 ಕೋಟಿ ರೂಪಾಯಿಯನ್ನು ರಾಜ್​ ಕುಂದ್ರಾ ಹಾಗೂ ಅವರ ಸಂಗಡಿಗರು ಬಿಟ್​ಕಾಯಿನ್ ಮೂಲಕ ಸಂಪಾದಿಸಿದ್ದರು. ಜೊತೆಗೆ ತಿಂಗಳಿಗೆ ಶೇ. 10 ಪಾವತಿಸುವುದಾಗಿ ಜನರಿಗೆ ಆಮಿಷ ಒಡ್ಡಿದ್ದರು. ಇದನ್ನು ಬೃಹತ್ ಬಿಟ್‌ಕಾಯಿನ್ ಹಗರಣ ಎಂದು ಆರೋಪಿಸಲಾಗಿದೆ. ಬಿಟ್‌ಕಾಯಿನ್ ಪ್ರಕರಣದಿಂದ ರಾಜ್ ಕುಂದ್ರಾ ಪ್ರಸ್ತುತ 150 ಕೋಟಿ ಲಾಭ ಗಳಿಸುತ್ತಿದ್ದಾರೆ ಎಂದು ಇಡಿ ಹೇಳುತ್ತದೆ.

ಬಿಟ್‌ಕಾಯಿನ್ ಹಗರಣದಲ್ಲಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಅವರ ಹೆಸರಿತ್ತು. ಇದು ಸಾವಿರಾರು ಕೋಟಿ ರೂಪಾಯಿ ಹಗರಣ ಎನ್ನಲಾಗಿದೆ. ಈ ಪ್ರಕರಣದಲ್ಲಿ ಇಬ್ಬರಿಗೂ ಇಡಿ 2018ರಲ್ಲಿ ಸಮನ್ಸ್ ನೀಡಿತ್ತು. ಅವರನ್ನೂ ಪ್ರಶ್ನಿಸಲಾಯಿತು. ಜಾರಿ ನಿರ್ದೇನಾಲಯದ ಅಧಿಕಾರಿಗಳು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ರಾಜ್ ಕುಂದ್ರಾಗೆ ಸೇರಿದ 97.7 ಕೋಟಿ ರೂಪಾಯಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಇರುವ ಜುಹು ಮನೆ, ಪುಣೆಯಲ್ಲಿರುವ ನಿವಾಸ, ರಾಜ್ ಕುಂದ್ರಾ ಹೆಸರಲ್ಲಿರುವ ಇಕ್ವಿಟಿ ಷೇರುಗಳನ್ನು ಸೀಜ್ ಮಾಡಲಾಗಿದೆ’ ಎಂದು ಮಾಹಿತಿ ನೀಡಲಾಗಿದೆ.

- Advertisement -

Related news

error: Content is protected !!