Monday, June 8, 2026
spot_imgspot_img
spot_imgspot_img

ಪುತ್ತೂರು: ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಗೆ ಬೆಂಬಲ ಸೂಚಿಸಿದ ಜೆಡಿಎಸ್‌ ಮುಖಂಡರು..!

- Advertisement -
- Advertisement -

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿರುವ ಜೆಡಿಎಸ್ ಪಕ್ಷಕ್ಕೆ ಕರಾವಳಿ ಜಿಲ್ಲೆಗಳಲ್ಲಿ ಹೊಡೆತ ಬಿದ್ದಿದ್ದು, ಜಿಲ್ಲೆಯ ಸ್ಥಳೀಯರು ನಾಯಕರು ಸೇರಿದಂತೆ ರಾಜ್ಯ ನಾಯಕರು ಜೆಡಿಎಸ್ ಗೆ ಗುಡ್ ಬೈ ಹೇಳಿದ್ದಾರೆ.

ಪುತ್ತೂರಿನಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಮುಖಂಡರು ನಾವೆಲ್ಲ ಜೆಡಿಎಸ್ ಪಕ್ಷದ ರಾಷ್ಟ್ರ ಮತ್ತು ರಾಜ್ಯ ಅಧ್ಯಕ್ಷರು ಮಾಧ್ಯಮಕ್ಕೆ ನೀಡುತ್ತಿರುವ ಹೇಳಿಕೆಗಳು ನೋಡುತ್ತಿದ್ದರೆ ಇವರು ಅಧಿಕಾರದ ದಾಹಕ್ಕೆ ಸಿಲುಕಿ ಈ ಪಕ್ಷದ ಜಾತ್ಯಾತೀತ ನಿಲುವನ್ನು ಸಂಪೂರ್ಣ ಮಣ್ಣು ಮಾಡಲಾಗಿದೆ. ಮಾತ್ರವಲ್ಲ ನಮ್ಮಂತ ಜಾತ್ಯತೀತ ನಿಲುವನ್ನು ಹೊಂದಿದವರಿಗೆ ಅಲ್ಲಿ ಉಸಿರು ಕಟ್ಟುವ ವಾತಾವರಣ ಸೃಷ್ಟಿಯಾಗಿದೆ. ಈಗ ಜೆಡಿಎಸ್ ಪಕ್ಷ ಕೋಮುವಾದಿ ಪಕ್ಷಗಳ ಜೊತೆ ಸೇರಿ ಅವರನ್ನು ಒಲೈಸಲು ಅಲ್ಪಸಂಖ್ಯಾತರನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ. ಇದಕ್ಕಾಗಿ ನಾವು ಕಾಂಗ್ರೇಸ್‌ಗೆ ಬೆಂಬಲ ಸೂಚಿಸುತ್ತೇವೆ ಎಂದು ಹೇಳಿದರು.

- Advertisement -

Related news

error: Content is protected !!