Saturday, June 6, 2026
spot_imgspot_img
spot_imgspot_img

ಸುಳ್ಯ: ಜೀಪ್‌- ಬೈಕ್ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು..!

- Advertisement -
- Advertisement -

ಸುಳ್ಯ: ಜೀಪು ಮತ್ತು ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿರುವ ಘಟನೆ ಅಜ್ಜಾವರದಲ್ಲಿ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಅಜ್ಜಾವರ ಪಡ್ಡಂಬೈಲು ಕೆಎಫ್ ಡಿಸಿ ಉದ್ಯೋಗಿ ವಿನಾಯಕ ಮೂರ್ತಿ( 52) ಎಂದು ಗಗುರುತಿಸಲಾಗಿದೆ.

ವಿನಾಯಕ ಮೂರ್ತಿ ಹಾಗೂ ಪತ್ನಿ ಮಂಜುಳಾ ಕೆಲಸ ಮುಗಿಸಿ ಮನೆಗೆ ವಾಪಾಸ್ಸಾಗುತ್ತಿರುವಾಗ ಘಟನೆ ನಡೆದಿದೆ ಎನ್ನಲಾಗಿದೆ. ತಕ್ಷಣವೇ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದ್ದರೂ ಗಂಭೀರವಾಗಿ ಗಾಯಗೊಂಡಿದ್ದ ವಿನಾಯಕ ಮೂರ್ತಿ ಮೃತಪಟ್ಟಿದ್ದಾರೆ. ಮಂಜುಳ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸ್ಥಳಾಂತರಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!