Friday, June 27, 2025
spot_imgspot_img
spot_imgspot_img

ಹಾಸನದಲ್ಲಿ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ : ಮನೆ ಕೆಲಸದಾಕೆಯಿಂದಲೇ ದೂರು; ಯಾರ್​ ಮೇಲೆ ಬಿತ್ತು FIR?

- Advertisement -
- Advertisement -

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. 47 ವರ್ಷದ ಮಹಿಳೆ ಸದ್ಯ ಹೊಳೆನರಸೀಪುರ ಟೌನ್ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ FIR ದಾಖಲಾಗಿದೆ.

ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿದೆ.
2015 ರಲ್ಲಿ ಹೆಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದಾರೆ. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಹೆಚ್‌.ಡಿ.ರೇವಣ್ಣ ಅವರು ಸಂತ್ರಸ್ತೆಗೆ ಹಾಸ್ಟೆಲ್‌ವೊಂದರಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. 2015ರಲ್ಲಿ ರೇವಣ್ಣ ಅವರ ಮನೆಯಲ್ಲೇ ಕೆಲಸಕ್ಕೆ ಸೇರಿಸಿಕೊಂಡಿದ್ದರು. ಮನೆಯಲ್ಲಿ 6 ಜನ ಹೆಣ್ಣುಮಕ್ಕಳು ಕೆಲಸ ಮಾಡುತ್ತಿದ್ದರು. ಎಲ್ಲರೂ ಪ್ರಜ್ವಲ್‌ ರೇವಣ್ಣ ಅವರು ಬಂದಾಗ ನಮಗೆ ಭಯವಾಗುತ್ತದೆ ಎಂದು ಭಯ ಹೊರ ಹಾಕುತ್ತಿದ್ದರು. ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಹುಡುಗರು ಸಹ ನನಗೆ ಮತ್ತು ಕೆಲಸ ಮಾಡುತ್ತಿದ್ದ ಹೆಣ್ಣುಮಕ್ಕಳಿಗೆ ಎಚ್ಚರಿಕೆಯಿಂದ ಇರುವಂತೆ ಹೇಳುತ್ತಿದ್ದರು. ಭವಾನಿ ಅವರು ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ರೇವಣ್ಣ ಅವರು ಸ್ಟೋರ್‌ ರೂಮ್‌ನಲ್ಲಿ ಕೈ ಹಿಡಿದು ಎಳೆಯುತ್ತಿದ್ದರು. ಹಣ್ಣು ಕೊಡುವ ಮೈ ಮುಟ್ಟುತ್ತಿದ್ದರು. ಸೀರೆಯ ಪಿನ್‌ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಅಡುಗೆ ಮನೆಯಲ್ಲಿ ಇದ್ದಾಗ ಹಿಂದಿನಿಂದ ಬಂದು ಮೈ ಮುಟ್ಟುತ್ತಿದ್ದರು. ಎಣ್ಣೆ ಹಚ್ಚಲು ನನ್ನನ್ನು ಕಳಿಸು ಎಂದು ಕೆಲಸ ಮಾಡುವ ಹುಡುಗನ ಹೇಳಿ ಕಳುಹಿಸುತ್ತಿದ್ದರು. ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ದೂರಿದ್ದಾರೆ. ಸದ್ಯ ಈ ದೂರಿನನ್ವಯ ಪ್ರಜ್ವಲ್ ರೇವಣ್ಣ ಹಾಗೂ ಹೆಚ್‌.ಡಿ ರೇವಣ್ಣ ಇಬ್ಬರ ಮೇಲೂ FIR ದಾಖಲು ಮಾಡಲಾಗಿದೆ.

- Advertisement -

Related news

error: Content is protected !!