- Advertisement -
- Advertisement -






ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡ ಘಟನೆ ಸಂಪಾಜೆ ಎಂಬಲ್ಲಿ ನಡದಿದೆ.
ವಿಟ್ಲದ ಅಡ್ಯನಡ್ಕದ ದಂಪತಿಗಳು ಕಾರಿನಲ್ಲಿ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಕಾರು ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ ಅವರ ಪತ್ನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯರು ಸೇರಿ ಅಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
- Advertisement -