Monday, June 30, 2025
spot_imgspot_img
spot_imgspot_img

ಕಾರ್ಕಳ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ..!

- Advertisement -
- Advertisement -

ಕಾರ್ಕಳ: ಪಟಾಕಿ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಸ್ಪೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಕಳೆದ ಕೆಲವು ವರ್ಷಗಳಿಂದ ಸಿಡಿಮದ್ದು ತಯಾರಿಸಲಾಗುತ್ತಿತ್ತು. ಒಂದು ಕಟ್ಟಡದಲ್ಲಿ ಇಂದು ಆಕಸ್ಮಿಕವಾಗಿ ಸ್ಫೋಟ ಸಂಭವಿಸಿ ಮಹಿಳೆಯರಿಬ್ಬರು ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದು ಸಂಪೂರ್ಣ ಹಾನಿಯಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

- Advertisement -

Related news

error: Content is protected !!