Sunday, June 29, 2025
spot_imgspot_img
spot_imgspot_img

ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಬಿಡುಗಡೆ ಮಾಡಿದ್ದ ಬಿಜೆಪಿ ಮುಖಂಡ ದೇವರಾಜೇ ಗೌಡ ಅರೆಸ್ಟ್‌

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ಸುದ್ದಿಗೋಷ್ಠಿ ನಡೆಸಿ, ಬಳಿಕ ನಾಟ್ ರಿಚೇಬಲ್ ಆಗಿದ್ದ ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಗುಹಿಲಾಳ್ ಟೋಲ್ ಬಳಿ ಹಿರಿಯೂರು ಪೊಲೀಸರು ದೇವರಾಜೇಗೌಡ ಅವರನ್ನು ಬಂಧಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರಿಗೆ ಹಾಸನ ಪೊಲೀಸರು ನೀಡಿದ್ದ ಮಾಹಿತಿ ಆಧಾರದ ಮೇಲೆ ಬಂಧಿಸಲಾಗಿದೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಕೀಲರ ವಿರುದ್ಧ ಪ್ರಕರಣ ದಾಖಲಾಗಿತ್ತು. ಏಪ್ರಿಲ್ 1ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ಥ ಮಹಿಳೆ ದೂರು ನೀಡಿದ್ದು, ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಲಾಗಿತ್ತು.

- Advertisement -

Related news

error: Content is protected !!