Sunday, June 29, 2025
spot_imgspot_img
spot_imgspot_img

ಬರೋಬ್ಬರಿ 15 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು

- Advertisement -
- Advertisement -

ರಾಜ್ಯದ ಇತಿಹಾಸದಲ್ಲೇ ಎರಡನೇ ಬಾರಿಗೆ ಭಾರೀ ಪ್ರಮಾಣದ ಗಾಂಜಾವನ್ನು ಕ್ರೈಂ ಬ್ಯೂರೋ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ.

ಒರಿಸ್ಸಾದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ ಗಾಂಜಾವನ್ನು ಬೀದರ್​ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಬಳಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿಗಳು ಕೆಎ – 38, 5510 ಸಂಖ್ಯೆಯ ಲಾರಿಯ ಮೇಲ್ಭಾಗದಲ್ಲಿ ಸಿಮೆಂಟ್ ಬ್ಲಾಕ್ಸ್‌ಗಳನ್ನು ತುಂಬಿ ಕೆಳಗೆ ಯಾರಿಗೂ ತಿಳಿಯದಂತೆ ಗಾಂಜಾವನ್ನು ಚೀಲಗಳಿಗೆ ತುಂಬಿ ಅಡಗಿಸಿಟ್ಟಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಎಸ್‌ಸಿಬಿ ಅಧಿಕಾರಿಗಳು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ವನಮಾರಪಳ್ಳಿ ಬಳಿ ಜಪ್ತಿ ಮಾಡಿದ್ದು, ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ., ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!