Thursday, June 4, 2026
spot_imgspot_img
spot_imgspot_img

ಬೈಕ್‌ಗೆ ಬಸ್ ಡಿಕ್ಕಿ; ಬೈಕ್ ಸವಾರರು ಸ್ಥಳದಲ್ಲೇ ಸಾವು..!

- Advertisement -
- Advertisement -

ಬೈಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ನಡೆದಿದೆ.

ಮೃತಪಟ್ಟ ಬೈಕ್ ಸವಾರರನ್ನು ತಿಕೋಟಾ ಪಟ್ಟಣದ ವಿಶಾಲ ಬಾಲಕೃಷ್ಣ ಶಿಂಧೆ (22) ಹಾಗೂ ರಮೇಶ ಪ್ರಕಾಶ ಮಾಶ್ಯಾಳ (20) ಎಂದು ಗುರುತಿಸಲಾಗಿದೆ.

ಬಸ್‌ನ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!