Sunday, June 29, 2025
spot_imgspot_img
spot_imgspot_img

ಏಕಾಏಕಿ ಸ್ಫೋಟಗೊಂಡ ರಾಯಲ್ ಎನ್‌ಫೀಲ್ಡ್ ಬೈಕ್ ..!

- Advertisement -
- Advertisement -

ಚಲಿಸುತ್ತಿದ್ದ ಬುಲೆಟ್ ಬೈಕ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಪೊಲೀಸ್ ಅಧಿಕಾರಿ ಸೇರಿದಂತೆ 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದ್ರಾಬಾದ್ ಮೊಘಲ್‌ಪುರ ಪ್ರದೇಶದಲ್ಲಿ ನಡೆದಿದೆ.

ಭವಾನಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೋಲ್ಟಾ ಹೋಟೆಲ್ ಬಳಿ ಈ ದುರಂತರ ಸಂಭವಿಸಿದೆ.

ಅಕ್ಬರ್ ಫಂಕ್ಷನ್ ಹಾಲ್ ಬಳಿ ಬುಲೆಟ್ ಬೈಕ್‌ನ ಇಂಧನ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಗಾಯಗೊಂಡ 10 ಮಂದಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬುಲೆಟ್ ಬೈಕ್‌ಗೆ ಅಂಟಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಈ ದುರಂತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿದಲ್ಲಿ ಸಖತ್ ವೈರಲ್ ಆಗಿದೆ.

- Advertisement -

Related news

error: Content is protected !!